Bara parihara ರಾಜ್ಯ ಸರಕಾರದಿಂದ ರೈತರಿಗೆ ತುರ್ತು ಅರ್ಥಿಕವಾಗಿ ನೆರವು ಘೋಷಣೆ

Bara parihara  ರಾಜ್ಯ ಸರಕಾರದಿಂದ ರೈತರಿಗೆ ತುರ್ತು ಅರ್ಥಿಕವಾಗಿ ನೆರವು ಘೋಷಣೆ

Bara parihara Karnataka


Bara parihara Karnataka : ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ 2,000 ವರೆಗೆ ಬೆಳೆ ಹಾನಿ ಪರಿಹಾರದ ಹಣವನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. Bara parihara-ರೈತರಿಗೆ ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?

ಮೊದಲ ಕಂತಿನ ಬರ ಪರಿಹಾರದ ಹಣ ವರ್ಗಾವಣೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಂಚಿಕೊಂಡಿರುವ
ಮಾಹಿತಿಯ ಪ್ರಕಾರ ಅರ್ಹ ರೈತರಿಗೆ ಮೊದಲ ಕಂತಿನಲ್ಲಿ ರೂ 2,000 ಹಣ ಸಿಗಲಿದೆ.


ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನಗಳ ಉದ್ಯೋಗ ಕೊಡಲು ಕೇಂದ್ರಕ್ಕೆ ಅನುಮತಿ ಕೋರಲಾಗಿತ್ತು. ಆದರೆ ಇನ್ನೂ ಅನುಮತಿ ನೀಡಿಲ್ಲ.
ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಮೂರು ಹಂತದಲ್ಲಿ ಘೋಷಿಸಿದ್ದೇವೆ‌. ರೂ.18,171 ಕೋಟಿ ಪರಿಹಾರದ ಆರ್ಥಿಕ ನೆರವು ನೀಡಲು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ನಮ್ಮ ತೆರಿಗೆ ಹಣದ ಪಾಲನ್ನು ನಮಗೆ ವಾಪಾಸ್ ಕೊಟ್ಟರೂ ಸಾಕು ನಮ್ಮ ರೈತರ ಕಷ್ಟಕ್ಕೆ ಸಹಾಯವಾಗುತ್ತಿತ್ತು.
ಬಿತ್ತನೆ ವೈಫಲ್ಯ ಮತ್ತು ಮಧ್ಯಂತರ ವಿಮೆ ಪರಿಹಾರಕ್ಕೆ ರಾಜ್ಯ ಸರ್ಕಾರ ಈಗಾಗಲೇ 6.5 ಲಕ್ಷ ರೈತರಿಗೆ ರೂ.460 ಕೋಟಿ ನಮ್ಮ ಸರ್ಕಾರ ಬಿಡುಗಡೆ ಮಾಡಿದೆ. ಕುಡಿಯುವ ನೀರು, ಮೇವಿಗೆ ರೂ.327 ಕೋಟಿ ಬಿಡುಗಡೆ, ರೂ.780 ಕೋಟಿ DC ಗಳ PD ಖಾತೆಯಲ್ಲಿದೆ. ಅವರೂ ತಹಶೀಲ್ದಾರ್ ಗಳಿಗೆ ಬಿಡುಗಡೆ ಮಾಡಿದ್ದಾರೆ.



ಯಾವ ತಾಲ್ಲೂಕುಗಳಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಇಲ್ಲದಂತೆ ನಿರ್ವಹಿಸಿದ್ದೇವೆ. ವಿವಿಧ ತಾಲ್ಲೂಕುಗಳ 60 ಹಳ್ಳಿಗಳಲ್ಲಿ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಿದ್ದೇವೆ. ಹೊರ ರಾಜ್ಯಕ್ಕೆ ಮೇವು ಹೋಗದಂತೆ ತಡೆದಿದ್ದೇವೆ. ಮೇವಿನ‌ ಬೀಜ ವಿತರಣೆ ಮಾಡಿದ್ದೇವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು